ಬೀದರ್: ಆಧುನಿಕ ಅನುಭವ ಮಂಟಪಕ್ಕೆ ₹50 ಕೋಟಿ ಬಿಡುಗಡೆ: ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ
Bidar, Bidar | Mar 6, 2024 ಆಧುನಿಕ ಅನುಭವ ಮಂಟಪಕ್ಕೆ ₹50 ಕೋಟಿ ಬಿಡುಗಡೆಮಾಡಲಾಗಿದೆ ಎಂದು ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಬಸವ ಕಲ್ಯಾಣದ ಆಧುನಿಕ ಅನುಭವ ಮಂಟಪ ಕಾಮಗಾರಿಗಳ ಬಿಲ್ ಪಾವತಿ ಮಾಡಲು ₹50 ಕೋಟಿ ಹಣವನ್ನು ಹಣಕಾಸು ಸಚಿವರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದ್ದು, ಹಣ ಜಿಲ್ಲಾಧಿಕಾರಿಗಳ ಖಾತೆಗೆ ಜಮಾ ಆಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಆಧುನಿಕ ಅನುಭವ ಮಂಟಪ ಕಾಮಗಾರಿಗೆ ಕಾಂಗ್ರೆಸ್ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ ಎಂದು ಪ್ರತಿಪಕ್ಷದ ಕೆಲವರು ಆರೋಪ ಮಾಡುತ್ತಿರುವುದರಲ್ಲಿ ಹುರುಳಿಲ್ಲ, ಸರ್ಕಾರ ಬಸವ ಕಲ್ಯಾಣದ ಅಭಿವೃದ್ಧಿಗೆ ಮತ್ತು ಆಧುನಿಕ ಅನುಭವ ಮಂಟಪ ನಿರ್ಮಾಣಕ್ಕೆ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.