ಚಿತ್ರದುರ್ಗದ ಸಮಾಜ ಕಲ್ಯಾಣ ಇಲಾಖೆ ಡಾ.ಬಿ.ಆರ್.ಅಂಬೇಡ್ಕರ್ ಫೆಲೋಶಿಪ್ ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಕೊಲಂಬಿಯಾ ವಿಶ್ವ ವಿದ್ಯಾಲಯಗಳಲ್ಲಿ ಮಾನವೀಯ ಅಧ್ಯಯನ, ಸಮಾಜ ವಿಜ್ಞಾನ, ಸಮುದಾಯ ವೈದ್ಯಕೀಯ ಸೇರಿದಂತೆ ಇತರೆ ಸಮಾಜ ಹಾಗೂ ಸಮುದಾಯ ಅಧ್ಯಯನ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಡಾ.ಬಿ.ಆರ್.ಅಂಬೇಡ್ಕರ್ ಫೆಲೋಶಿಪ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.