ಬೆಂಗಳೂರು ಉತ್ತರ: ಕೆ.ಆರ್ ಮಾರುಕಟ್ಟೆ ಸುತ್ತಲೂ ಸ್ವಚ್ಛತೆ ಕಾಪಾಡಲು ನೀಲನಕ್ಷೆ ಸಿದ್ಧಪಡಿಸಿ : ನಗರದಲ್ಲಿ ರಾಜೇಂದ್ರ ಚೋಳನ್
ನಗರದ ಕೆ.ಆರ್. ಮಾರುಕಟ್ಟೆಯ ಸುತ್ತಮುತ್ತಲಿನ ಪ್ರದೇಶ ಸ್ವಚ್ಛತೆ ಕಾಪಾಡಲು ನೀಲನಕ್ಷೆ ಸಿದ್ಧಪಡಿಸಲು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ರವರು ಭಾನುವಾರ ಸಂಜೆ 6 ಗಂಟೆ ಸು.ಅರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೆ.ಆರ್. ಮಾರುಕಟ್ಟೆಗೆ ಇಂದು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಕೆ.ಆರ್. ಮಾರುಕಟ್ಟೆಯಲ್ಲಿ ಹೆಚ್ಚು ಹಸಿ ತ್ಯಾಜ್ಯ ಉತ್ಪತ್ತಿ ಆಗಲಿದ್ದು, ಅದನ್ನು ನಾವು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ಈ ನಿಟ್ಟಿನಲ್ಲಿ ಸಮಗ್ರ ಯೋಜನೆ ರೂಪಿಸಿ ನೀಲನಕ್ಷೆ ಸಿದ್ದಪಡಿಸಿ ಹಂತ-ಹಂತವಾಗಿ ಅದನ್ನು ಅನುಷ್ಠಾನಗೊಳಿಸಲು ಕ್ರಮವಹಿಸುವಂತೆ ಸೂಚನೆ ನೀಡಲಾಯಿತು.