ಬೆಂಗಳೂರು ಉತ್ತರ: ನೃಪತುಂಗ ವಿಶ್ವವಿದ್ಯಾಲಯದ ನೂತನ
ಶೈಕ್ಷಣಿಕ ಕಟ್ಟಡದ ಉದ್ಘಾಟಿಸಿದ ಸಿಎಂ
ಮಂಗಳವಾರ ಬೆಂಗಳೂರಿನಲ್ಲಿ ನೃಪತುಂಗ ವಿಶ್ವವಿದ್ಯಾಲಯದ ನೂತನ ಶೈಕ್ಷಣಿಕ ಕಟ್ಟಡವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, 52 ಕೋಟಿ ಅಂದಾಜಿನಲ್ಲಿ 7 ಅಂತಸ್ತಿನ ನೂತನ ಕಟ್ಟಡ ಉದ್ಘಾಟಿಸಲಾಗಿದೆ. ಎಂಟನೇ ಅಂತಸ್ತನ್ನು ನಿರ್ಮಿಸಲು 8 ಕೋಟಿ ರೂಪಾಯಿಗೆ ಬೇಡಿಕೆ ಸಲ್ಲಿಸಿದ್ದಾರೆ. ಅದನ್ನು ಸರ್ಕಾರ ಕೊಡಲು ಸಿದ್ಧವಿದೆ ಎಂದರು. ಸಮಾರಂಭದಲ್ಲಿ ಉನ್ನತ ಶಿಕ್ಷಣ ಸಚಿವರಾದ ಎಂ.ಸಿ. ಸುಧಾಕರ್, ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಫ್ರೊ. ಫಜೀಹ ಸುಲ್ತಾನ ಇತರರು ಇದ್ದರು.