ದೊಡ್ಡಬಳ್ಳಾಪುರ: ದೇವಾಲಯಗಳ ಸ್ವಚ್ಚತಾ ಸಮಿತಿಯಿಂದ ಇಂದು ದೊಡ್ಡಬಳ್ಳಾಪುರ ನಗರಕ್ಕೆ ಹೊಂದಿಕೊಂಡಿರುವ ನಂದಿಮೋರಿ ಬಳಿಯಿರುವ ಶ್ರೀ ಬೊಮ್ಮಲಿಂಗೇಶ್ವರ ದೇವಾಲಯಕ್ಕೆ ಹೊಂದಿಕೊಂಡಿರುವ ಕಲ್ಯಾಣಿಯ ಸ್ವಚ್ಚತಾ ಕಾರ್ಯ ನಡೆಯಿತು. ಕಡೆಯ ಕಾರ್ತಿಕ ಸೋಮವಾರದ ಪ್ರಯುಕ್ತ ಈ ದೇವಾಲಯದಲ್ಲಿ ವಿಶೇಷಪೂಜೆ ನಡೆಯಲಿದ್ದು ಕಲ್ಯಾಣಿಯ ಬಳಿ ಗಂಗಾ ಪೂಜೆ ಹಾಗೂ ಲಕ್ಷದೀಪೋತ್ಸವ ಕಾರ್ಯಕ್ರಮ ನಡೆಯಲಿದೆ. ಸಹಸ್ರಾರು ಭಕ್ತರು ಈ ದೇವಾಲಯಕ್ಕೆ ಆಗಮಿಸಲಿದ್ದು ಬಂದಂತಹ ಭಕ್ತಾದಿಗಳಿಗೆ ಅನ್ನಪ್ರಸಾಧವಿರುತ್ತದೆ ಎಂದು ಮಡಿವಾಳ ಸಂಘದ ತಾಲ್ಲೂಕು ಅಧ್ಯಕ್ಷರಾದ ಶಂಕರ್ ತಿಳಿಸಿದರು. ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಇರುವ ಕಾರಣ ದೇವಾಲಯಗಳ ಸ್ವಚ್ಚತಾ ಸಮಿತಿಗೆ ದೇವಾಲಯದ