ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನೇವರಿ 12 ಸೋಮವಾರದಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಸೇಡಂ ಪಟ್ಟಣಕ್ಕೆ ಭೇಟಿ ನೀಡುವ ಸಿಎಂ, ₹579.68 ಕೋಟಿ ವೆಚ್ಚದ 292 ಯೋಜನೆಗಳಿಗೆ ಅಡಿಗಲ್ಲು ಹಾಗೂ ₹110.35 ಕೋಟಿ ವೆಚ್ಚದಲ್ಲಿ ಈಗಾಗಲೇ ಕೈಗೆತ್ತಿಕೊಂಡು ಪೂರ್ಣಗೊಂಡ 76 ಅಭಿವೃದ್ದಿ ಕಾಮಗಾರಿಗಳನ್ನು ಉದ್ಘಾಟನೆ ನೆರವೇರಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ, ಸಚಿವ ಶರಣಪ್ರಕಾಶ್ ಪಾಟೀಲ್, ಜಿಲ್ಲಾಧಿಕಾರಿ ಬಿ ಫೌಜಿಯಾ ತರನುಮ್ಮ ಸೇರಿದಂತೆ ಹಿರಿಯ ಅಧಿಕಾರಿಗಳು ಪಟ್ಟಣಕ್ಕೆ ಭೇಟಿ ನೀಡಿ, ಸಿಎಂ ವೇದಿಕೆ ಕಾರ್ಯಕ್ರಮ ನಡೆಯುವ ಸ್ಥಳವನ್ನು ಹಾಗೂ ಸಿದ್ಧತೆಯನ್ನು ಪರಿಶೀಲನೆ ಮಾಡಿದರು. ಶನಿವಾರ 4 ಗಂಟೆ ಸುಮಾರಿಗೆ ಭೇಟಿ ನೀಡಿದ್ದರು.