ಅಣ್ಣಿಗೇರಿ ಪಟ್ಟಣದಲ್ಲಿ ಅಮೃತೇಶ್ವರ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು. ದಕ್ಷಿಣದ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಅಣ್ಣಿಗೇರಿ ಅಮೃತೇಶ್ವರ ದೇವಾಲಯ ರಥೋತ್ಸವಕ್ಕೆ ಮಾಜಿ ಸಚಿವ ಶಂಕರಪಾಟೀಲ್ ಮುನೇನಕೊಪ್ಪ ಚಾಲನೆ ನೀಡಿದರು. ವಿವಿಧ ವಾದ್ಯ ಮೇಳಗಳೊಂದಿಗೆ ವಿಜೃಂಭಣೆಯಿಂದ ರಥೋತ್ಸವ ಜರಗಿತು. ಅಮೃತೇಶ್ವರ ಜಾತ್ರೆಗೆ ಜನ ಸಾಗರ ಹರಿದು ಬಂದಿತ್ತು. ಸಾವಿರಾರು ಜನರು ದೇವರ ದರ್ಶನವನ್ನು ಪಡೆದು ಪುನೀತರಾದರು.