ಬೆಂಗಳೂರು ಉತ್ತರ: ವಿಜಯನಗರದ ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಗಮನ ಸೆಳೆದ ಗೇಟ್ ವೇ ಆಫ್ ಧರ್ಮಸ್ಥಳ
ಬೆಂಗಳೂರಿನ ವಿಜಯನಗರದಲ್ಲಿ ಸೆಪ್ಟೆಂಬರ್ 14ರಂದು ಸಂಜೆ 5 ಗಂಟೆಗೆ ಆಯೋಜಿಸಲಾಗಿದ್ದ ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಭಾಗಿಯಾದರು.ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ನೇತೃತ್ವದಲ್ಲಿ ಅದ್ಧೂರಿಯಾಗಿ ನಡೆದ ಶೋಭಾಯಾತ್ರೆಯಲ್ಲಿ ಧರ್ಮಸ್ಥಳ ಧಾರ್ಮಿಕ ಕ್ಷೇತ್ರಕ್ಕೆ ಬೆಂಬಲ ಸೂಚಕವಾಗಿ ಗೇಟ್ ವೇ ಆಫ್ ಧರ್ಮಸ್ಥಳ ನಿರ್ಮಿಸಿದ್ದುದು ಗಮನ ಸೆಳೆಯಿತು. ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಭಾಗಿಯಾಗಿ ಗಣೇಶ ವಿಸರ್ಜನೆಗೆ ಸಾಥ್ ನೀಡಿದರು.