ರಾಮನಗರ: ಜಾತಿ ಗಣತಿ ಮೂಲಕ ಸರ್ಕಾರ ಹಿಂದೂ ಸಮುದಾಯವನ್ನು ವಿಭಜಿಸುತ್ತಿದೆ. ನಗರದಲ್ಲಿ ಹಿಂದೂ ಹಿತರಕ್ಷಣಾ ಸಮಿತಿಯಿಂದ ಪ್ರತಿಭಟನೆ.
ರಾಮನಗರ -- ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯ ಹೆಸರಿನಲ್ಲಿ ಬಹುಸಂಖ್ಯಾತ ಹಿಂದೂ ಸಮುದಾಯವನ್ನು ವಿಭಜಿಸುತ್ತಿರುವ ರಾಜ್ಯ ಸರ್ಕಾರದ ಹಿಂದೂ ವಿರೋಧಿ ಧೋರಣೆಯ ವಿರುದ್ಧ ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ ನಡೆಸಿತು. ಹಳೆ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸರ್ಕಾದ ವಿರುದ್ಧ ಘೋಷಣೆ ಕೂಗುವ ಮೂಲಕ ಮೆರವಣಿ ನಡೆಸಿ, ನಂತರ ಅಪರಾ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು, ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆಯ ಪ್ರಾಂತ್ಯ ಕಾರ್ಯಾಲಯದ ಪ್ರಮುಖ್ ರಾದ ಸಾ.ನಾಗ