ಸಿದ್ಧಾಪುರ: ಬಾಲಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಸಂಘದ ಉದ್ಘಾಟನೆ : ಶಾಸಕ ಭೀಮಣ್ಣ ಭಾಗಿ
ಸಿದ್ದಾಪುರ : ಪಟ್ಟಣದ ಬಾಲಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಸಂಘ ಸಿದ್ದಾಪುರ ಇದರ ಉದ್ಘಾಟನೆ ಹಾಗೂ ಮಾಧ್ಯಮ ದಿನ ಆಚರಣೆ ಕಾರ್ಯಕ್ರಮ ಮಂಗಳವಾರ ನಡೆಯಿತು ಶಾಸಕ ಭೀಮಣ್ಣ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿ ಸಮಾಜದ ನಾಲ್ಕನೇ ಅಂಗವಾದ ಮಾಧ್ಯಮ ಕ್ಷೇತ್ರ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ ಸಮಾಜವನ್ನು ಸರಿದಾರಿಗೆ ಕೊಂಡೊಯಲು ಮಾರ್ಗದರ್ಶನ ನೀಡಬೇಕು ಎಂದು ಕರೆ ನೀಡಿದರು. ಈ ವೇಳೆ ಮಾಧ್ಯಮ ಪ್ರತಿನಿಧಿಗಳ ಸಂಘದ ಅಧ್ಯಕ್ಷ ಕನ್ನೇಶ್ ನಾಯ್ಕ ಸೇರಿದಂತೆ ಪತ್ರಕರ್ತರು ಇತರ ಮುಖಂಡರು ಇದ್ದರು.