ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಿದವರಿಗೆ ಶಿಕ್ಷೆ ಆಗಬೇಕು ಎಂದು ತೀರ್ಥಹಳ್ಳಿಯಲ್ಲಿ ಸೊಪ್ಪುಗುಡ್ಡೆ ರಾಘವೇಂದ್ರ ಅವರು ಒತ್ತಾಯಿಸಿದ್ದಾರೆ.ಈ ಕುರಿತು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಿದವರ ವಿರುದ್ಧ 10 ವರ್ಷದಿಂದ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಿ ದೇವಸ್ಥಾನವೇ ನಿಲ್ಸ್ಬಿಟ್ರು ಎಂಬ ಸ್ಥಿತಿ ನಿರ್ಮಾಣ ಮಾಡಿದ್ದರು. ಆದರೆ ಧರ್ಮ ಗೆದ್ದಿದೆ ತಪ್ಪಿತಸ್ಥರ ವಿರುದ್ಧ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು.