*ಸಚಿವ ಕೆ.ಹೆಚ್ ಮುನಿಯಪ್ಪ ಅವರಿಂದ ಅಕ್ಕ ಪಡೆಗೆ ಚಾಲನೆ* ಮಹಿಳೆಯರು ಮತ್ತು ಮಕ್ಕಳಲ್ಲಿ ಕಾನೂನು ಅರಿವು, ಜಾಗೃತಿ ಶಿಕ್ಷಣ ನೀಡುವುದರ ಜೊತೆಗೆ ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ/ನೆರವು ನೀಡುವ ಉದ್ದೇಶದಿಂದ ಅಕ್ಕ ಪಡೆ ಯೋಜನೆ ಜಾರಿಯಾಗಿದ್ದು ಇಂದು ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾ ಮಟ್ಟದ *ಅಕ್ಕ ಪಡೆ* ಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಚಾಲನೆ ನೀಡಿದರು.