ಹಾಸನ: ಗಣೇಶ ಮೆರವಣಿಗೆ ವೇಳೆ ದುರಂತ ಪ್ರಕರಣ ಹೆಚ್ಚಿನ ಚಿಕಿತ್ಸೆಗಾಗಿ ಮತ್ತೊಬ್ಬ ಯುವಕ ಹಿಮ್ಸ್ ಮೈಸೂರಿನ ಆಸ್ಪತ್ರೆಗೆ ಶಿಫ್ಟ್
Hassan, Hassan | Sep 15, 2025 ಮೊಸಳೆ ಹೊಸಳ್ಳಿಯಲ್ಲಿ ಟ್ರಕ್ ಹರಿದು ನಡೆದ ಅವಘಡಕ್ಕೆ ಸಂಬಂಧಪಟ್ಟಂತೆ ಮತ್ತೊಬ್ಬ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ನಗರದ ಹಿಮ್ಸ್ ಆಸ್ಪತ್ರೆಯಿಂದ ಇಂದು ಮೈಸೂರಿಗೆ ಶಿಫ್ಟ್ ಮಾಡಲಾಗಿದೆ.21 ವರ್ಷದ ಆಕಾಶ್ ಗೆ ಟ್ರಕ್ ಅವಘಡದ ವೇಳೆ ಗಂಭೀರ ಗಾಯಗಳಾಗಿದ್ದವು. ಅವರನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು.ಈತ ಮೊಸಳೆ ಹೊಸಳ್ಳಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿ ಓದುತ್ತಿದ್ದ, ಅವರ ಕುಟುಂಬಸ್ಥರ ಜೊತೆ ಆಂಬುಲೆನ್ಸ್ ನಲ್ಲಿ ಇಂದು ಮೈಸೂರಿಗೆ ಕರೆದುಕೊಂಡು ಹೋಗಲಾಗಿದೆ.