ಜಗಳೂರು: ಜಗಳೂರಲ್ಲಿ ಕುರುಬ ಜಾತಿ ಎಸ್.ಟಿ ಸೇರ್ಪಡೆ ನಿರ್ಧಾರ ಖಂಡಿಸಿ ಪ್ರತಿಭಟನೆ
ಜಗಳೂರಲ್ಲಿ ಕುರುಬ ಜಾತಿ ಎಸ್.ಟಿ ಸೇರ್ಪಡೆ ನಿರ್ಧಾರ ಖಂಡಿಸಿ ಪ್ರತಿಭಟನೆ. ನಕಲಿ ಜಾತಿ ಪ್ರಮಾಣ ಪತ್ರ ಪಡೆಯುವವರ ಹಾಗೂ ಕುರುಬ ಜಾತಿ ಸೇರಿದಂತೆ ಇತರೆ ಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಹೊರಟಿರುವ ರಾಜ್ಯ ಸರಕಾರದ ವಿರುದ್ದ ಎಲ್ ಜಿ ಹಾವನೂರು ತಾಲ್ಲೂಕು ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮಂಗಳವಾರ ಸಂಜೆ 4 ಗಂಟೆಗೆ ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾಕಾರರು ಸರಕಾರದ ವಿರುದ್ದ ಘೋಷಣೆ ಕೂಗುತ್ತಾ ಮಹಾತ್ಮಗಾಂಧಿ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ತಾಲ್ಲೂಕು ಕಛೇರಿ ಮುಂಬಾಗ ಜಮಾಯಿಸಿ ತಹಶೀಲ್ದಾರ್ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಿದರು.