ಕಲಬುರಗಿ: ಕಲಬುರಗಿಯಲ್ಲಿ ನವೆಂಬರ್ 1ರಂದು ಅದ್ಧೂರಿ ರಾಜ್ಯೋತ್ಸವ ಆಚರಣೆ: ಸಿದ್ಧತೆ ಆರಂಭ
ಕಲಬುರಗಿಯಲ್ಲಿ ನವೆಂಬರ್ 1ರಂದು ನಡೆಯಲಿರುವ ರಾಜ್ಯೋತ್ಸವ ಆಚರಣೆಯ ಕುರಿತು ಜಿಲ್ಲಾಧಿಕಾರಿ ಇಕ್ರಂ ಶರೀಫ್ ಮಾಹಿತಿ ನೀಡಿದ್ದಾರೆ. ನಗರೇಶ್ವರ ಶಾಲಾ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮೆರವಣಿಗೆ, ಸುರಕ್ಷತೆ ಮತ್ತು ಅಗತ್ಯ ವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.