ಕೇಣಿಯಲ್ಲಿ ವಾಣಿಜ್ಯ ಬಂದರು ನಿರ್ಮಾಣ ವಿರೋಧಿ ಹೋರಾಟವು ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕರಾಳ ದಿನವನ್ನು ಆಚರಿಸುವ ಮೂಲಕ ಕರೆ ನೀಡಿದ್ದ ಅಂಕೋಲಾ ಬಂದ್ ಯಶಸ್ವಿಯಾಗಿದೆ. ಮಂಗಳವಾರ 7ರವರೆಗೆ ತಾಲೂಕಿನಾದ್ಯಂತ ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಹೋರಾಟಕ್ಕೆ ವ್ಯಾಪಕ ಬೆಂಬಲ ವ್ಯಕ್ತಪಡಿಸಿದರು. ಸಾಗರೋಪಾದಿಯಲ್ಲಿ ಬಂದ ಹೋರಾಟಗಾರರು ಪಟ್ಟಣದ ಜೈಹಿಂದ್ ವೃತ್ತದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜಮಾವಣೆಗೊಳ್ಳುವ ಮೂಲಕ ತೀವ್ರ ಸ್ವರೂಪದ ಪ್ರತಿಭಟನೆಯನ್ನು ನಡೆಸಿದರು.