ಕೃಷ್ಣರಾಜನಗರ: ಕೃಷ್ಣರಾಜನಗರದಲ್ಲಿ ತಾಲ್ಲೂಕಾಡಳಿತ ಮತ್ತು ಆರೋಗ್ಯ ಇಲಾಖೆಯಿಂದ ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಗಳಿಗೆ ಆರೋಗ್ಯ ತಪಾಸಣೆ
ಕೃಷ್ಣರಾಜನಗರ ತಾಲ್ಲೂಕು ಆಡಳಿತ ಮತ್ತು ಆರೋಗ್ಯ ಇಲಾಖೆಯಿಂದ ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಗಳಿಗೆ ಉಚಿತ ಆರೋಗ್ಯ ತಪಾಸಣೆಯನ್ನು ಇಂದು ನಡೆಸಲಾಯಿತು. ತಾಲ್ಲೂಕು ಕಚೇರಿಯಲ್ಲಿ ನಡೆದ ಆರೋಗ್ಯ ತಪಾಸಣೆ ಶಿಬಿರದಲ್ಲಿ 140ಕ್ಕೂ ಹೆಚ್ಚು ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಗಳು ತಪಾಸಣೆ ಮಾಡಿಸಿಕೊಂಡರು. ಈ ವೇಳೆ ಕೆಲಸದ ಒತ್ತಡದ ಜೊತೆಗೆ ಆರೋಗ್ಯದ ಕಡೆಗೂ ಹೆಚ್ಚು ಗಮನ ಹರಿಸಿ ಎಂದು ಅಧಿಕಾರಿಗಳಿಗೆ ತಹಶೀಲ್ದಾರ್ ಸಿ.ಎಸ್. ಪೂರ್ಣಿಮಾ ಸೂಚಿಸಿದರು.