ಶಿರಸಿ: ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಮಹಿಳೆಗೆ ಕಿರುಕುಳ ನೀಡಿದ ವ್ಯಕ್ತಿ ಬಂಧನ
ಶಿರಸಿ: ನಗರದ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಯನ್ನು ಶಿರಸಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೋಳ್ಳಿಯ ಗುಡ್ಡಮಾಡಿ ಮೋಹನ ಮುತ್ತಯ್ಯ ಶೆಟ್ಟಿ (45) ಬಂಧಿತ ವ್ಯಕ್ತಿ. ಮಂಗಳೂರಿನ ಕೆ.ಎಸ್. ಹೆಗಡೆ ಆಸ್ಪತ್ರೆಯಿಂದ ಚಿಕಿತ್ಸೆ ಪಡೆದುಕೊಂಡು ಜು 15 ರಂದು ಶಿರಸಿಯ ಕೇಂದ್ರಿಯ ಬಸ್ ನಿಲ್ದಾಣದಲ್ಲಿ ಇಳಿದು ಎಕ್ಕಂಬಿ ಬಸ್ ಗೆ ಕಾಯುತ್ತ ಕುಳಿತುಕೊಂಡಿದ್ದಾಗ ಸುಮಾರು ರಾತ್ರಿ 9.30 ಗಂಟೆಗೆ ಅಪರಿಚಿತ ವ್ಯಕ್ತಿಯೊಬ್ಬ ಅನುಚಿತವಾಗಿ ವರ್ತಿಸಿ, ಲೈಂಗಿಕ ದೌರ್ಜನ್ಯ ಎಸೆಗಿ ಸಾರ್ವಜನಿಕವಾಗಿ ಮುಜುಗರವನ್ನುಂಟು ಮಾಡಿದ್ದಾನೆ ಎಂದು ಮಹಿಳೆ ಶಿರಸಿ ನಗರ ಠಾಣೆಯಲ್ಲಿ ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದರು.