ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಅಧಿಕಾರಿ ಕಾರು ಅಪಘಾತದಲ್ಲಿ ಮೃತಪಟ್ಟಿರುವುದು ತುಂಬಾ ನೋವಾಗಿದೆ ಎಂದು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ತಿಳಿಸಿದರು. ಧಾರವಾಡ ನಗರದಲ್ಲಿ ಶನಿವಾರ ಮದ್ಯಾಹ್ನ 3 ಗಂಟೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಣ್ಣಿಗೇರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸ್ ಅಧಿಕಾರಿ ಪಂಚಾಕ್ಷರಿ ಸಾಲಿಮಠ ಅಗಲಿಕೆಯಿಂದ ನೋವಾಗಿದೆ ಎಂದು ತಿಳಿಸಿದರು.