ಕುರುಗೊಡು: ಕೆ.ಸೋಮಲಾಪುರ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ನ.18, ಮಂಗಳವಾರ ಮಧ್ಯಾಹ್ನ 12ಕ್ಕೆ ಕುರುಗೋಡು ತಾಲೂಕಿನ ಕೆ.ಸೋಮಲಾಪುರ ಗ್ರಾಮದ ಎಸ್ಸಿ ಕಾಲೋನಿಯಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜೆ.ಎನ್. ಗಣೇಶ್ ಅವರು ಭಾನುವಾರ ಶಂಕುಸ್ಥಾಪನೆ ನೆರವೇರಿಸಿದರು. ಸುಮಾರು ₹50 ಲಕ್ಷ ವೆಚ್ಚದಲ್ಲಿ ಈ ಮೂಲಸೌಕರ್ಯ ಕಾಮಗಾರಿಗಳು ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಗಣೇಶ್, ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಕರ್ಯ ಸುಧಾರಣೆ ಸರ್ಕಾರದ ಆದ್ಯತೆಯಾಗಿದ್ದು, ರಸ್ತೆ–ಚರಂಡಿ ಅಭಿವೃದ್ಧಿಯಿಂದ ಜನರು ಅನುಭವಿಸುತ್ತಿರುವ ತೊಂದರೆಗಳಿಗೆ ಪರಿಹಾರ ಸಿಗಲಿದೆ ಎಂದು ಹೇಳಿದರು.