ಹುಬ್ಬಳ್ಳಿಯ ಹಳೆ ಕೋರ್ಟ್ ಬಳಿ ಇರುವ ಶ್ರೀ ಸಾಯಿ ಮಂದಿರದಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಆರೋಪಿಸಿ, ಶ್ರೀರಾಮ ಸೇನೆ ಕಾರ್ಯಕರ್ತರು ಶುಕ್ರವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಮನವಿ ಸಲ್ಲಿಸಿದರು. ಮಧ್ಯಾಹ್ನ 2 ಗಂಟೆಗೆ ಪ್ರತಿಭಟನೆ ನಡೆಸಿದ ಅವರು, ಮುಗ್ಧ ಭಕ್ತರ ಭಾವನೆಗಳಿಗೆ ಧಕ್ಕೆಯಾಗದಂತೆ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಇದ್ದರು.