ಬಂಗಾರಪೇಟೆ: ಸಮೀಕ್ಷೆಗೆ ಬೇಕಾಗುವ ಸಂಪೂರ್ಣ ಮಾಹಿತಿಯನ್ನು ಸಾರ್ವಜನಿಕರು ಕಡ್ಡಾಯವಾಗಿ ನೀಡಿ:ನಗರದಲ್ಲಿ ಶಾಸಕ ಎಸ್ ಎನ್ ನಾರಾಯಣಸ್ವಾಮಿ
ಹಿಂದುಳಿದ ವರ್ಗಗಳ ಶೈಕ್ಷಣಿಕ ಸಮೀಕ್ಷೆಯನ್ನು ಸರ್ಕಾರ 15ದಿನಗಳ ಅವಧಿ ಒಳಗೆ ಮುಗಿಸಬೇಕೆಂದು ತಿಳಿಸಿದೆ ಸಮೀಕ್ಷೆಗೆ ಬೇಕಾಗುವ ಸಂಪೂರ್ಣ ಮಾಹಿತಿಯನ್ನು ಸಾರ್ವಜನಿಕರು ಕಡ್ಡಾಯವಾಗಿ ನೀಡಿ ಎಂದು ಶಾಸಕ ಎಸ್.ಎನ್ ನಾರಾಯಣಸ್ವಾಮಿ ಮನವಿ ಮಾಡಿದರು.ಪಟ್ಟಣದ ಶಾಸಕ ಎಸ್ಎನ್ ನಾರಾಯಣಸ್ವಾಮಿಯವರ ಮನೆಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಾಂಕೇತಿಕವಾಗಿ ಸೋಮವಾಚಾಲನೆ ನೀಡಿ ಮಾತನಾಡಿದ ಅವರು ತಾಲೂಕಿನಲ್ಲಿ ಶೈಕ್ಷಣಿಕ ಸಮೀಕ್ಷೆಯನ್ನು ಇಂದು ನಮ್ಮ ಮನೆಯಿಂದ ಪ್ರಾರಂಭವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಪ್ರತಿ ಮನೆಗೂ ಭೇಟಿ ನೀಡಿದಾಗ ಸರ್ಕಾರ ಕೇಳಿರುವಂತಹ 60 ಅಂಶಗಳಿಗೂ ಸಂಪೂರ್ಣ ಮಾಹಿತಿಯನ್ನು ನೀಡಿ ಎಂದರು.