ಮಂಡ್ಯ: ಸೆ.22ರಿಂದ ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ: ನಗರದಲ್ಲಿ ಜಿಲ್ಲಾಧಿಕಾರಿ ಡಾ ಕುಮಾರ
Mandya, Mandya | Sep 15, 2025 ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸೆಪ್ಟೆಂಬರ್ 22 ರಿಂದ ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಹಮ್ಮಿಕೊಂಡಿದ್ದು, ಈ ಸಮೀಕ್ಷೆಯು ಸಾರ್ವಜನಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಮಟ್ಟವನ್ನು ತಿಳಿಯಲು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಸ್ಪಷ್ಟಪಡಿಸಿದರು. ಅವರು ಜಿಪಂ ಕಾವೇರಿ ಸಭಾಂಗಣದಲ್ಲಿ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗ, ಜಿಲ್ಲಾಡಳಿತ ಮತ್ತು ಜಿಪಂ ವತಿಯಿಂದ ಆಯೋಜಿಸಲಾಗಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ -2025 ರ ಜಿಲ್ಲಾ ಹಂತದ ಮಾಸ್ಟರ್ ಟ್ರೈನರ್ಸ್ ಗಳ ತರಬೇತಿ ಕಾರ್ಯಾಗಾರದಲ್ಲಿ ಭಾಗಿಯಾಗಿ ಮಾತನಾಡಿದರು. ಸದರಿ ಸಮೀಕ್ಷೆಯನ್ನು ಯಾವುದೇ ಜಾತಿ, ಧರ್ಮ ಹಾಗೂ ಮತವನ್ನು ತಿಳಿದಿಕೊಳ್ಳಲು ನಡೆಸುತ್ತಿಲ್ಲ ಎಂದರು.