ಮಹಾಲಕ್ಷ್ಮಿ ಲೇಔಟ್ ನ ಕಾಮಾಕ್ಷಿಪಾಳ್ಯದಲ್ಲಿರುವ ಶ್ರೀ ಬಾಲಗಂಗಾಧರಸ್ವಾಮಿ ಉದ್ಯಾನವನದಲ್ಲಿ ಶ್ರೀ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಜನ್ಮ ದಿನಾಚರಣೆಯ ಅಂಗವಾಗಿ ಭಾನುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಅವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಶಾಸಕ ಗೋಪಾಲಯ್ಯ ಅವರು, ಸಮಾಜ ಸುಧಾರಕರಾಗಿ ಹಲವು ದಶಕಗಳ ಕಾಲ ಮಾರ್ಗದರ್ಶನ ಮಾಡಿದ ಪರಮಪೂಜ್ಯ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮಿಜಿಯವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದು ಕರೆ ನೀಡಿದರು..