ಉತ್ತರ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ನ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದ ನಿಮಿತ್ತ ಮುಂಡಗೋಡ ಪಟ್ಟಣಕ್ಕೆ ಆಗಮಿಸಿದ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆಯಾದ ಸೌಮ್ಯಾ ರೆಡ್ಡಿ ಅವರನ್ನು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮಂಗಳವಾರ ಸಂಜೆ 4.15 ರಸುಮಾರು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಪಕ್ಷದ ಹಿರಿಯ ನಾಯಕರು, ಮಹಿಳಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ವಿಶೇಷ ಉತ್ಸಾಹ ತುಂಬಿದರು.