ಬಳ್ಳಾರಿ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅಕ್ಟೋಬರ್ 31ರವರೆಗೆ ಕಾಲಾವಕಾಶ
ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಯೋಜನೆಗೆ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಅಕ್ಟೋಬರ್ 31ರವರೆಗೆ ವಿಸ್ತರಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಈ ಮಾಹಿತಿ ನೀಡಿದೆ.