ಸಿಂದಗಿ: ಪಟ್ಟಣದಲ್ಲಿ ಪ್ರವಾಹ ಪೀಡಿತ ಸಂತ್ರಸ್ತರ ಕುಂದು ಕೊರತೆ ಆಲಿಸಿದ ಶಾಸಕ ಅಶೋಕ ಮನಗೂಳಿ
ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಗೃಹ ಕಚೇರಿಯಲ್ಲಿ ಬುಧವಾರ ಮಧ್ಯಾಹ್ನ 3ಗಂಟೆ ಸುಮಾರಿಗೆ ಸಾರ್ವಜನಿಕರ ಕುಂದು ಕೊರತೆಯನ್ನು ಶಾಸಕ ಅಶೋಕ್ ಮನಗೂಳಿ ಆಲಿಸಿದರು. ಪ್ರವಾಹದಿಂದ ಮನೆಮಠ ಕಳೆದುಕೊಂಡ ಸಂತ್ರಸ್ತರು ಸೂಕ್ತ ಪರಿಹಾರ ಒದಗಿಸಿಕೊಡಬೇಕು ಮತ್ತು ವಸತಿ ಕಲ್ಪಿಸಿಕೊಡಬೇಕು ಎಂದು ಶಾಸಕರ ಮುಂದೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಈಗಾಗಲೇ ಮುಖ್ಯಮಂತ್ರಿಗಳು ವೈಮಾನಿಕ ಸಮೀಕ್ಷೆ ನಡೆಸಿ, ತುರ್ತು ಪರಿಹಾರವಾಗಿ 5ಸಾವಿರ ನೀಡುತ್ತೇವೆ, ನಂತರ ಹಾನಿಯಾದ ಮನೆಗಳ ಸಮೀಕ್ಷೆ ಮಾಡಿ ಸೂಕ್ತ ಪರಿಹಾರ ನೀಡುತ್ತೇವೆ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು ಸಾರ್ವಜನಿಕರು ಅಧಿಕಾರಿಗಳು ಉಪಸ್ಥಿತರಿದ್ದರು.