ಮಳವಳ್ಳಿ: ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
ಮಳವಳ್ಳಿ : ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆದಿ ಕವಿ ಮಹರ್ಷಿ ಶ್ರೀ ವಾಲ್ಮೀಕಿ ಅವರ ಜಯಂತಿಯನ್ನು ಆಚರಿಸಲಾ ಯಿತು. ತಾಲ್ಲೂಕು ಆಡಳಿತ ವತಿಯಿಂದ ಮಂಗಳವಾರ ಮಧ್ಯಾಹ್ನ 1.30 ರ ಸಮಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ತಾಲ್ಲೂಕು ತಹಶಿಲ್ದಾರ್ ಡಾ. ಲೋಕೇಶ್ ಅವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಜೊತೆಗೆ ವಾಲ್ಮೀಕಿ ಅವರ ಭಾವ ಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿದ ನಡುವೆ ನೆರೆದಿದ್ದ ಅಧಿಕಾರಗಳು ಹಾಗೂ ಮುಖಂಡರು ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.