ಶಿರಸಿ: ನಗರದಲ್ಲಿ ಸೈಬರ್ ಅಪರಾಧ ಜಾಗೃತಿ ಅಭಿಯಾನ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಾಲನೆ
ಶಿರಸಿ : ನಗರ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆಯ ಆಶ್ರಯದಡಿ ಸೈಬರ್ ಅಪರಾಧ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಶನಿವಾರ ಮಧ್ಯಾಹ್ನ 12:00 ಗಂಟೆ ಸುಮಾರಿಗೆ ಹಮ್ಮಿಕೊಳ್ಳಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಕುಮಾರ್ ಎನ್. ಎಂ ಅವರು ಅಭಿಯಾನಕ್ಕೆ ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ಡಿವೈಎಸ್ಪಿ ಗೀತಾ ಪಾಟೀಲ್, ಸಿಪಿಐ ಶಶಿಕಾಂತ ವರ್ಮಾ, ಪಿಎಸ್ಐ ನಾಗಪ್ಪ ಹಾಗೂ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಸೈಬರ್ ಜಾಗೃತಿ ಅಭಿಯಾನವು ನಗರದ ವಿವಿಧ ಕಡೆಗಳಲ್ಲಿ ಸಂಚರಿಸಿತು. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸೈಬರ್ ಅಪರಾಧದ ಬಗ್ಗೆ ತಿಳಿಸಿ, ಅರಿವು ಮೂಡಿಸಲಾಯಿತು.