ಮುಳಬಾಗಿಲು: ನಗರದಲ್ಲಿ ಶ್ರೀ ಉದ್ಭವ ಶಿವಲಿಂಗೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ
Mulbagal, Kolar | May 27, 2025 ಮುಳಬಾಗಲುನ ಶಿವಕೇಶವ ನಗರದಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ಉದ್ಭವ ಶಿವಲಿಂಗೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವವು ಭಕ್ತರ ಸಮ್ಮುಖದಲ್ಲಿ ಮಂಗಳವಾರ ಮಧ್ಯಾನ 2 ಗಂಟೆ ಸಮಯದಲ್ಲಿ ವಿಜೃಂಭಣೆಯಿಂದ ನೆರವೇರಿತು. ಬ್ರಹ್ಮ ರಥೋತ್ಸವದ ಅಂಗವಾಗಿ ಶ್ರೀ ಶಿವಲಿಂಗೇಶ್ವರ ಸ್ವಾಮಿಗೆ ವಿಶೇಷ ಪೂಜೆ, ಅಭಿಷೇಕ, ಹೂವಿನ ಅಲಂಕಾರ ಮಾಡಲಾಗಿತ್ತು. ಮಧ್ಯಾಹ್ನ ರಥಶಾಂತಿ, ರಥಬಲಿ, ಆಚಾರ್ಯ ಪೂಜೆ ನಡೆದು ಮಂಗಳ ವಾದ್ಯಗಳೊಂದಿಗೆ ಉತ್ಸವ ಮೂರ್ತಿಯನ್ನು ತರಲಾಯಿತು. ನಂತರ ರಥೋತ್ಸವಕ್ಕೆ ಚಾಲನೆ ನೀಡಿದರು.