ಬೆಂಗಳೂರು ದಕ್ಷಿಣ: ಮಡಿವಾಳ ಕೆರೆಯಲ್ಲಿ ಕಳೆ ತೆಗೆಯುವ ಯಂತ್ರದ ಪ್ರಾಯೋಗಿಕ ಚಾಲನೆ ನೀಡಿದ ಮಹೇಶ್ವರ್ ರಾವ್
ಮಡಿವಾಳ ಕೆರೆಯಲ್ಲಿ ಕಳೆ ತೆಗೆಯುವ ಯಂತ್ರಕ್ಕೆ ಪ್ರಾಯೋಗಿಕ ಚಾಲನೆ ನೀಡಲಾಗಿದ್ದು, ಅವಶ್ಯಕತೆಗೆ ಅನುಗುಣವಾಗಿ ಇತರೆ ಕೆರೆಗಳಲ್ಲಿಯೂ ಬಳಸಿಕೊಳ್ಳುವಂತೆ ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಮಡಿವಾಳ ಕೆರೆಯಲ್ಲಿ ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಳೆ ತೆಗೆಯುವ ಯಂತ್ರಕ್ಕೆ ಪ್ರಾಯೋಗಿಕ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿರುವ ಕೆರೆಗಳಲ್ಲಿ ಜಲಕಳೆ ತೆರವುಗೊಳಿಸುವ ಉದ್ದೇಶದಿಂದ ಹೊಸದಾಗಿ ಅತ್ಯಾಧುನಿಕ ಕಳೆ ತೆಗೆಯುವ ಯಂತ್ರವನ್ನು ಖರೀದಿಸಲಾಗಿದೆ.