ಕಲಬುರಗಿ : ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಗೌನಹಳ್ಳಿ ಗ್ರಾಮದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಸಹಿತ ನಾಲ್ವರು ದುರ್ಮರಣಕ್ಕಿಡಾದ ಘಟನೆಗೆ ಸಂಬಂಧಿಸಿದಂತೆ, ಕಾರು ಚಾಲನೆಯಲ್ಲಿ ನಿರ್ಲಕ್ಷ್ಯ ನಾಲ್ವರ ಸಾವಿಗೆ ಕಾರಣವಾದ ಆರೋಪದಡಿ ಮಹಾಂತೇಶ ಬೀಳಗಿ ಕಾರು ಚಾಲಕ ಆ್ಯಂಥೋನಿ ರಾಜ್ ವಿರುದ್ಧ ಎಫ್ಐಆರ್ ದಾಖಲಾಗಿದೆ.. ನ26 ರಂದು ಮಧ್ಯಾನ 12.30 ಕ್ಕೆ ಮಾಹಿತಿ ಲಭ್ಯವಾಗಿದೆ. ಮೃತ ಮಹಾಂತೇಶ ಬೀಳಗಿ ಸಂಬಂಧಿ ಬಸವರಾಜ್ ಕಮರಟಗಿಯಿಂದ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕ ಆ್ಯಂಥೋನಿ ರಾಜ್ ವಿರುದ್ಧ ನೀಡಿರೋ ದೂರಿನ ಅನ್ವಯ ಎಫ್ಐಆರ್ ದಾಖಲಾಗಿದೆ.