ಹೊಳಲ್ಕೆರೆ ವಲಯ ಅರಣ್ಯಾಧಿಕಾರಿ ಸತೀಶ್ ರನ್ನ ಅಮಾನತ್ತು ಮಾಡುವಂತೆ ಒತ್ತಾಯಿಸಿ ಚಿತ್ರದುರ್ಗದ ಅರಣ್ಯ ಇಲಾಖೆ ಕಚೇರಿ ಬಳಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು. ಹೊಳಲ್ಕೆರೆ ತಾಲ್ಲೂಕು ವಲಯ ಅರಣ್ಯಾಧಿಕಾರಿಗಳಾದ ಸತೀಶ್, ಉಪ ಅರಣ್ಯ ಸಂರಕ್ಷಣಾಧಿಕಾರಿಯಾದ ರಾಘವೇಂದ್ರ ಮತ್ತು ಅರಣ್ಯ ಸಂರಕ್ಷಣಾಧಿಕಾರಿಯಾದ ಚಂದ್ರಶೇಖರ ಇವರನ್ನು ಕೆಲಸದಿಂದ ವಜಾಗೊಳಿಸುವಂತೆ ಆಗ್ರಹಿಸಿ ಉಪ ವಲಯ ಅರಣ್ಯಾಧಿಕಾರಿ ಚಂದ್ರಶೇಖರ್ ಅವರಿಗೆ ಮನವಿ ಸಲ್ಲಿಸಿದ್ದಾರೆ