ಮಂಡ್ಯ: ನಗರದ ಮಿಮ್ಸ್ ಗೆ ಆಹಾರ ಆಯೋಗ ಹಾಗೂ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ದಿಢೀರ್ ಭೇಟಿ, ನಿರ್ದೇಶಕನಿಗೆ ತರಾಟೆ
Mandya, Mandya | Sep 20, 2025 ಮಂಡ್ಯ ಮೆಡಿಕಲ್ ಕಾಲೇಜಿಗೆ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ. ಕೃಷ್ಣ ಹಾಗೂ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗದ ಅಧ್ಯಕ್ಷ ಕೆ. ನಾಗಣ್ಣಗೌಡ ಶನಿವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಿಮ್ಸ್ ನಿರ್ದೇಶಕ ಡಾ.ನರಸಿಂಹಮೂರ್ತಿ ಹಾಗೂ ಮೆಡಿಕಲ್ ವ್ಯವಸ್ಥಾಪಕ ನಿರ್ದೇಶಕ ಡಾ.ಹೆಚ್ ಕೆ ಶಿವಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡು, ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಪ್ರತಿನಿತ್ಯ ನೀಡುವ ಆಹಾರದ ಗುಣಮಟ್ಟ ಪರೀಕ್ಷಿಸಿ ಮಾತನಾಡಿದ ಅವರು, ರೋಗಿಗಳಿಗೆ ಪ್ರತಿದಿನ ಹಣ್ಣುಗಳನ್ನು ಕೊಡುವ ಜೊತೆಗೆ ಉತ್ತಮ ಗುಣಮಟ್ಟದ ಆಹಾರ ನೀಡಬೇಕು. ಊಟದ ಜೊತೆಯಲ್ಲಿ ಮೊಟ್ಟೆ, ಮೊಸರು ಸಹಾ ನೀಡಬೇಕು. ಆದರೆ ಇಲ್ಲಿ ಕೊಡುತ್ತಿರುವ ಆಹಾರ ಗುಣಮಟ್ಟ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.