ಶಿವಮೊಗ್ಗ: ಒಳ ಮೀಸಲಾತಿ ವರ್ಗಿಕರಣ ವಿರೋಧಿಸಿ ನಗರದಲ್ಲಿ ಬಂಜಾರ ಸಮುದಾಯದಿಂದ ಪ್ರತಿಭಟನೆ
ಒಳ ಮೀಸಲಾತಿ ವರ್ಗಿಕರಣ ವಿರೋಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸರ್ಕಾರದ ವಿರುದ್ಧ ಶಿವಮೊಗ್ಗ ಬಂಜಾರ ಸಂಘ ಬಂಜಾರ ಹಕ್ಕು ಸಂರಕ್ಷಣಾ ಸಮಿತಿ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ನಗರದ ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ನಡೆಸುವ ಮೂಲಕ ಪ್ರತಿಭಟನೆಯನ್ನು ನಡೆಸಲಾಯಿತು.ಸೆ.12 ರಿಂದ ಅನಿರ್ಧಿಷ್ಟಾವಧಿ ಧರಣಿ ನಡೆಸುಲಾಗುತ್ತಿದ್ದು, ನಾಲ್ಕನೇ ದಿನವಾದ ಮಂಗಳವಾರದಂದು ಬಂಜಾರಾ ಮಹಿಳೆಯರು ಸಾಂಪ್ರದಾಯಕ ಅಡುಗೆ ತೊಟ್ಟು ಪ್ರತಿಭಟನೆಯಲ್ಲಿ ಭಾಗವಹಿಸಿದರು. ಶಿವಮೊಗ್ಗ ನಗರದ ಶಾಸಕ ಚನ್ನಬಸಪ್ಪ ಅವರು ಅನಿರ್ಧಿಷ್ಟಾವದಿ ಹೋರಾಟಕ್ಕೆ ಬೆಂಬಲವನ್ನ ಸೂಚಿಸಿದರು ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಬೇಕು ಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿದರು.