ಚಿತ್ರದುರ್ಗ: ಒಳಾಂಗಣ ಚಿತ್ರೀಕರಣಕ್ಕೆ ಭೂಮಿ ಮಂಜೂರಾತಿಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಕಂಟೀರವ ಸ್ಟುಡಿಯೋಸ್ ನಿಯಮಿತ ಅಧ್ಯಕ್ಷ ಮಹಬೂಬ್ ಪಾಷಾ
ಒಳಾಂಗಣ ಚಿತ್ರೀಕರಣಕ್ಕೆ ಭೂಮಿ ಮಂಜೂರಾತಿಗೆ ಆಗ್ರಹಿಸಿ ಚಿತ್ರದುರ್ಗದ ಜಿಲ್ಲಾಧಿಕಾರಿಗೆ ಮಹಬೂಬ್ ಪಾಷಾ ಅವರು ಮನವಿ ಸಲ್ಲಿಸಿದ್ದಾರೆ. ಸೋಮವಾರ ಮಧ್ಯಾಹ್ನ 2 ಗಂಟೆಗೆ ಈ ಬಗ್ಗೆ ಜಿಲ್ಲಾಡಳಿತ ಪ್ರಕಟಣೆ ನೀಡಿದೆ. ಇನ್ನೂ ಒಳಾಂಗಣ ಚಿತ್ರೀಕರಣಕ್ಕೆ ಅನುಕೂಲವಾಗುವಂತೆ ಚಿತ್ರದುರ್ಗ ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಅವಶ್ಯಕತೆ ಇರುವ ಭೂಮಿ ಮಂಜೂರು ಮಾಡುವಂತೆ ಶ್ರೀ ಕಂಠೀರವ ಸ್ಟುಡಿಯೋಸ್ ನಿಯಮಿತ ಅಧ್ಯಕ್ಷ ಮಹಬೂಬ್ ಪಾಷಾ ಅವರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ