ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಎಚ್.ಜಿ.ಸತೀಶ್ ಕುಮಾರ್, ಸದಸ್ಯರಾದ ದೇವರಾಜ್, ಶಿಲ್ಪ.ಜಿ, ಪಿಡಿಒ ಎಸ್. ನಂದಿನಿ, ಕಾರ್ಯದರ್ಶಿ ಮರಿಸಿದ್ದಮ್ಮ, ಗ್ರಾಮ ಪಂಚಾಯ್ತಿ ಸಿಬ್ಬಂದಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಹನುಮಂತರಾಜು, ಶಾಲೆಯ ಮುಖ್ಯಶಿಕ್ಷಕ ಎ.ಪಿ.ವಿರೂಪಾಕ್ಷಯ್ಯ, ಶಾಲಾ ಮಕ್ಕಳು ಭಾಗಿಯಾಗಿದ್ದರು. ರಾಷ್ಟ್ರಗೀತೆ, ಭಗವದ್ಗೀತೆ, ಸಂವಿಧಾನ ಪ್ರಸ್ತಾವನೆ ಓದುವ ಮೂಲಕ ಕಾರ್ಯಕ್ರಮ ಪ್ರಾರಂಭಿಸಲಾಯಿತು.