ಸಾಗರ: ಮಲ್ಲಂದೂರು ಮೀಸಲು ಅರಣ್ಯ ಒತ್ತುವರಿ ತೆರವು, ಡಿಸಿಎಫ್ ಮೋಹನ್ ಕುಮಾರ್ ನೇತೃತ್ವದಲ್ಲಿ 6.24 ಎಕರೆ ತೆರವು
Sagar, Shimoga | Oct 5, 2025 ಸಾಗರ ವಿಭಾಗ ವ್ಯಾಪ್ತಿಗೆ ಬರುವ ಸಾಗರ ತಾಲ್ಲೂಕು ಆನಂದಪುರಂ ಹೋಬಳಿ ಮಲಂದೂರು ಗ್ರಾಮದ ಸ.ನಂ 157 ರಲ್ಲಿ ಮೀಸಲು ಅರಣ್ಯ ದಲ್ಲಿ ಒತ್ತುವರಿ ಮಾಡಿದ್ದ 6.24 ಎಕರೆ ಜಾಗವನ್ನು ಡಿಸಿಎಫ್ ಮೋಹನ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಭಾನುವಾರ ಸಂಜೆ 5 ಗಂಟೆಗೆ ತೆರವು ಮಾಡಲಾಗಿದೆ. ಆರ್.ಎಂ ಷಣ್ಮುಖ ಎಂಬುವವರು ಮಲಂದೂರು ಮೀಸಲು ಅರಣ್ಯ ಪ್ರದೇಶದಲ್ಲಿ 6-24 ಎಕರೆ ಪ್ರದೇಶವನ್ನು ಅನಧಿಕೃತವಾಗಿ ಒತ್ತುವರಿ ಮಾಡಿರುತ್ತಾರೆ. ಇದಲ್ಲದೇ ಸದರಿಯವರು ಶರಾವತಿ ಮುಳುಗಡೆ ಸಂತ್ರಸ್ಥರ ಯೋಜನೆಯಡಿ ಹಾಗೂ ಅರಣ್ಯ ಹಕ್ಕು ಕಾಯ್ದೆಯಡಿ ಇವರು ಜಮೀನುಗಳನ್ನು ಮಂಜೂರಾತಿ ಪಡೆದಿದ್ದಾರೆ. ಇದರೊಂದಿಗೆ ಹಿಡುವಳಿ ಜಮೀನುಗಳನ್ನು ಹೊಂದಿರುವಂತೆ ದೊಡ್ಡ ಹಿಡುವಳಿದಾರರಾಗಿರುತ್ತಾರೆ.