ಚಾಮರಾಜನಗರ: ಗ್ರಾಚ್ಯುಟಿ ಮೊತ್ತ ಬಿಡುಗಡೆಗೆ ಆಗ್ರಹಿಸಿ ಸಂತ್ತೆಮರಳ್ಳಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ
ಚಾಮರಾಜನಗರ ತಾಲೂಕಿನ ಸಂತ್ತೆಮರಳ್ಳಿಯಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು 2011 ರಿಂದ 2013 ಮಾರ್ಚ್ ವರೆಗೆ ನಿವೃತ್ತಿಯಾದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿರಿಗೂ ಸುಪ್ರೀಂ ಕೋರ್ಟ್ ಆದೇಶದಂತೆ 1972 ರ. ಗ್ರಾಚ್ಯುಟಿ ಮೊತ್ತವನ್ನು ಕೊಡುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಿದರು. ತಮ್ಮ ಬೇಡಿಕೆಗಳು ಈಡೇರಿಕೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು.