ತಿಕೋಟಾ: ವಿಜಯಪುರ: ತಿಕೋಟಾ ಬಿ.ಎಲ್.ಡಿ.ಇ ನರ್ಸಿಂಗ್ ಕಾಲೇಜಿನಲ್ಲಿ ಅದ್ದೂರಿಯಾಗಿ ನಡೆದ ವಾರ್ಷಿಕ ಕ್ರೀಡಾಕೂಟ 2026
ವಿಜಯಪುರ ಜಿಲ್ಲೆಯ ತಿಕೋಟಾ ಬಿ.ಎಲ್.ಡಿ.ಇ ನರ್ಸಿಂಗ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ 2026ರ ಉದ್ಘಾಟನಾ ಸಮಾರಂಭ ನಡೆಯಿತು. ಜಿಲ್ಲಾ ಕ್ರೀಡಾ ಅಧಿಕಾರಿ ರಾಜಶೇಖರ ದಯವಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಸಲಹೆ ನೀಡಿದರು.