ಭಾಲ್ಕಿ: ತಾಪಂ,ಜಿಪಂ, ಗ್ರಾಪಂ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗಿ; ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರಿಗೆ ಸಚಿವ ಈಶ್ವರ ಖಂಡ್ರೆ ಸಲಹೆ
Bhalki, Bidar | Nov 30, 2025 ಭಾಲ್ಕಿ ನಗರದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಈಶ್ವರ ಖಂಡ್ರೆ ಅವರು ಇಂದು ಸಭೆ ನಡೆಸಿದರು. ಮುಂಬರುವ ಜಿಪಂ, ತಾಪಂ, ಗ್ರಾಮ ಪಂಚಾಯತ್ ಮತ್ತು ನಗರಸಭೆ ಚುನಾವಣೆಯನ್ನು ಯಶಸ್ವಿಯಾಗಿ ಎದುರಿಸಲು ಸಂಘಟನೆ ಬಲವರ್ಧನೆ ಮತ್ತು ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರು, ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ನಗರ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದರು.