ನಗರದಲ್ಲಿ ಡಿ. 9 ರಂದು ಬಿಜೆಪಿ ಪಕ್ಷವು ರಾಜ್ಯ ಸರ್ಕಾರದ ವಿರುದ್ಧ ಪ್ರತೀಭಟನೆ ಹಿನ್ನೆಲೆ ಸ್ಥಳಕ್ಕೆ ಬಿಜೆಪಿ ಮುಖಂಡರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಡಿ. 9 ರಂದು ಬಿಜೆಪಿ ಪಕ್ಷವು ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಪ್ರತಿಭಟನೆಯ ಮುಖ್ಯ ಉದ್ದೇಶ ಬೆಳಗಾವಿಯ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವುದಾಗಿದೆ. ಈ ಹಿನ್ನೆಲೆ ಭಾನುವಾರ ಬಿಜೆಪಿ ನಾಯಕರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ. ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್. ರವಿ ಕುಮಾರ್ ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ ಗ್ರಾಮಾಂತರ ಅಧ್ಯಕ್ಷ ಸುಭಾಷ್ ಪಾಟೀಲ್ ಉಪಸ್ಥಿತರಿದ್ದರು