ಮುಧೋಳ: ನಗರದ ರನ್ನ ಗ್ರಂಥಾಲಯಕ್ಕೆ ಉಚಿತ ವೈ-ಫೈ ಸೌಲಭ್ಯ ನೀಡಿದ ಸಚಿವ ಆರ್.ಬಿ.ತಿಮ್ಮಾಪೂರ್
ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಮುಧೋಳ ನಗರದಲ್ಲಿನ ರನ್ನ ಗ್ರಂಥಾಲಯದಲ್ಲಿ ಐಎಎಸ್ ಮತ್ತು ಕೆಎಎಸ್ ಆಕಾಂಕ್ಷಿಗಳಿಗೆ ಅನುಕೂಲ ಕಲ್ಪಿಸಲು ಆರ್.ಬಿ. ತಿಮ್ಮಾಪುರ ಫೌಂಡೇಶನ್ ವತಿಯಿಂದ ಉಚಿತ ವೈ-ಫೈ ಸೌಲಭ್ಯವನ್ನು ಒದಗಿಸಿ,ಲೋಕಾರ್ಪಣೆಗೊಳಿಸಿದರು.ಈ ಮೂಲಕ ಅವರು ತಮ್ಮ 64ನೇ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, "ಯುವಕರು ಜ್ಞಾನವಂತರಾದರೆ ಮಾತ್ರ ಸಮಾಜ ಅಭಿವೃದ್ಧಿ ಹೊಂದುತ್ತದೆ. ನನ್ನ ಹುಟ್ಟುಹಬ್ಬವನ್ನು ಇನ್ನಷ್ಟು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಈ ಸೌಲಭ್ಯವನ್ನು ಒದಗಿಸಲಾಗಿದೆ. ಇದು ವಿದ್ಯಾರ್ಥಿಗಳಿಗೆ ಅವರ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಲಿ ಎಂದು ಹೇಳಿದರು.