ವಿಜಯಪುರ: ಮಳೆಯ ಅವಾಂತರಕ್ಕೆ ನಗರದ ವಿವಿಧ ಬಡಾವಣೆಗಳಿಗೆ ನುಗ್ಗಿದ ಮಳೆ ನೀರು, ಜನಜೀವನ ಅಸ್ತವ್ಯಸ್ತ
ವಿಜಯಪುರ ನಗರದಲ್ಲಿ ಬುಧವಾರ ಸಾಯಂಕಾಲ 4ಗಂಟೆ ಸುಮಾರಿಗೆ ಸುರಿದ ಧಾರಾಕಾರ ಮಳೆ ಅವಾಂತರಕ್ಕೆ ನಗರದ ವಿವಿಧ ಬಡಾವಣೆಗಳಲ್ಲಿ ನೀರು ನುಗ್ಗಿ ಸಾರ್ವಜನಿಕರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಸತತವಾಗಿ 2 ಗಂಟೆಗಳ ಕಾಲ ಸುರಿದ ಮಳೆಯ ಅವಾಂತರಕ್ಕೆ ನಗರದ ಕೇಂದ್ರ ಬಸ್ ನಿಲ್ದಾಣದ ಮುಖ್ಯ ರಸ್ತೆ, ಪೆಟ್ರೋಲ ಪಂಪ್ ಸೇರದಂತೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿತ್ತು. ವಾಹನಸವರರ ವಾಹನಗಳು ನೀರಿನಲ್ಲಿ ಮುಳುಗಿರುವ ದೃಶ್ಯಗಳು ಕಂಡುಬಂದವು. ಮಳೆಯ ಅವಾಂತರಕ್ಕೆ ಜನ ಜೀವನ ಅಸ್ತವ್ಯಸ್ತವಾಗಿ ಹಿಡಿ ಶಾಪ ಹಾಕುವ ಪರಿಸ್ಥಿತಿ ನಿರ್ಮಾಣವಾಗಿತ್ತು.