ಬುಧವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಸದಾಶಿವನಗರದಲ್ಲಿ ಮಾಜಿ ಸಂಸದ ಡಿಕೆ ಸುರೇಶ್ ಅವರ ಜನ್ಮದಿನದ ಪ್ರಯುಕ್ತ ಬೆಂಗಳೂರು ದಕ್ಷಿಣ ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆಯಿಂದ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಡಿಕೆ ಸುರೇಶ್ ಅವರನ್ನ ಭೇಟಿಯಾಗಿ ಶುಭಕೋರಿದರು. ಇದೇ ವೇಳೆ ಹಲವು ಸಾರ್ವಜನಿಕರು ತಮ್ಮ ಸಮಸ್ಯೆಗಳ ಅಹವಾಲುಗಳನ್ನ ನೀಡಿದರು. ಹುಟ್ಟುಹಬ್ಬ ಇದ್ದರು, ಬಂದಂತ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸುವಲ್ಲಿ ಡಿಕೆ ಸುರೇಶ್ ಅವರು ನಿರತರಾದರು. ಕೆಲವು ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಟ್ಟರು.