ಕರ್ನಾಟಕದ ಗಡಿ ಭಾಗದ ಕೇರಳ ರಾಜ್ಯದ ಪ್ರದೇಶದಲ್ಲಿ ಕನ್ನಡ ಶಾಲೆಗಳಲ್ಲಿ ಒತ್ತಾಯಪೂರ್ವಕವಾಗಿ ಮಲೆಯಾಳ ಭಾಷೆ ಹೇರುವ ಕೆಲಸಕ್ಕೆ ಅಲ್ಲಿನ ಕಮ್ಯುನಿಸ್ಟ್ ಪಕ್ಷದ ಸರಕಾರ ಕೈ ಹಾಕಿದೆ. ಇದು ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಲ್ಲೇಶ್ವರಂ ಬಳಿ ಶನಿವಾರ ಸಂಜೆ 6 ಗಂಟೆ ಸುಮಾರಿಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ಕೊಟ್ಟರು. ಬಿಜೆಪಿ ಇದನ್ನು ಪ್ರಬಲವಾಗಿ ಖಂಡಿಸುತ್ತದೆ. ಅಷ್ಟೇ ಅಲ್ಲ; ಎಲ್ಲ ಕನ್ನಡಪರ ಸಂಘಟನೆಗಳು ಇದನ್ನು ಪ್ರಬಲವಾಗಿ ವಿರೋಧಿಸಿವೆ. ಕೇರಳದಲ್ಲಿರುವ ನಮ್ಮ ಕನ್ನಡ ಶಾಲೆಗಳನ್ನು ಉಳಿಸುವ ಕೆಲಸದಲ್ಲಿ ಕೇವಲ ನಿಮ್ಮ ಹೇಳಿಕೆ, ಪತ್ರ ಬರೆದರೆ ಸಾಕಾಗುವುದಿಲ್ಲ.