ಅಂಕೋಲ: ಧರ್ಮಸ್ಥಳ ಚಲೋ ಕಾರ್ಯಕ್ರಮದ ನಿಮಿತ್ತ ಪಟ್ಟಣದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ನೇತೃತ್ವದಲ್ಲಿ ಸಭೆ
ಪಟ್ಟಣದಲ್ಲಿ ಅಂಕೋಲಾ ಮಂಡಲದ ಕಾರ್ಯಾಲಯದಲ್ಲಿ ಶನಿವಾರ ಸಂಜೆ 5ಕ್ಕೆ ಆಯೋಜಿಸಿದ ಧರ್ಮಸ್ಥಳ ಚಲೋ ಕಾರ್ಯಕ್ರಮದ ಕುರಿತು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಅವರು ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸೆ. 1 ರಂದು ಬಿಜೆಪಿಯಿಂದ ಹಮ್ಮಿಕೊಂಡ ಧರ್ಮ ರಕ್ಷಣೆಗಾಗಿ ಧರ್ಮಸ್ಥಳ ಚಲೋ ಕಾರ್ಯಕ್ರಮದಲ್ಲಿ ಜಿಲ್ಲೆಯಿಂದ ಪ್ರತಿಯೊಬ್ಬರೂ ಭಾಗವಹಿಸಿ ಎಂದರು. ಈ ವೇಳೆ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.