ಶಿರಸಿ: ಸಾರಿಗೆ ಬಸ್‌ಗಳ ವ್ಯತ್ಯಯ, ಶಿರಸಿ ಸಾರಿಗೆ ವಿಭಾಗೀಯ ಕಚೇರಿಯಲ್ಲಿ ಹೋರಾಟಗಾರ ಅನಂತಮೂರ್ತಿ ನೇತೃತ್ವದಲ್ಲಿ ಪ್ರತಿಭಟನೆ
ಶಿರಸಿ: ಶಿರಸಿ ವಿಭಾಗದಲ್ಲಿ ಸಾರಿಗೆ ಇಲಾಖೆ ಬಸ್ ಗಳು ಪದೇ ಪದೇ ಕೆಟ್ಟು ನಿಲ್ಲುತ್ತಿವೆ. ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ. ಎಷ್ಟೇ ಮನವಿ ಮಾಡಿದರೂ ಸಹ ಈ ಕುರಿತು ಅಧಿಕಾರಿಗಳು ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ. ಶಾಸಕ ಭೀಮಣ್ಣ ನಾಯ್ಕರಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಕೇರ್ ಲೆಸ್ ಮನಸ್ಥಿತಿ ತೋರಿದ್ದಾರೆ. ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆ ಬಂದಾಗಿನಿಂದ ಸಾರಿಗೆ ಇಲಾಖೆಗೆ ಗ್ರಹಣ, ಗ್ರಹಚಾರ ಹಿಡಿದಿದೆ ಎಂದು ಬಿಜೆಪಿ ರೈತಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಅನಂತಮೂರ್ತಿ ಹೆಗಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಮವಾರ ಸಾರಿಗೆ ಇಲಾಖೆ ಶಿರಸಿ ವಿಭಾಗೀಯ ಕಛೇರಿಯಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದರು.