ಶಿವಮೊಗ್ಗ: ಸಾಗರ ತಹಶೀಲ್ದಾರ್ ಕಚೇರಿಯಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆ ಯತ್ನಿಸಿದ ಗ್ರಾಮ ಲೆಕ್ಕಾಧಿಕಾರಿ
ಶಿವಮೊಗ್ಗ ಜಿಲ್ಲೆಯ ಸಾಗರ ತಹಶೀಲ್ದಾರ್ ಕಚೇರಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗುರುವಾರ ನಡೆದಿದೆ. ಮಾನಸಿಕ ಕಿರುಕುಳ ಆರೋಪ ಸಹ ಕೇಳಿ ಬಂದಿದ್ದು ಸಾಗರ ತಾಲೂಕಿನ ಹರಿಹರದ ಗ್ರಾಮ ಪಂಚಾಯಿತಿಯ ಗ್ರಾಮ ಲೆಕ್ಕಾಧಿಕಾರಿ ವಿಮಲ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಅಧಿಕಾರಿಯೊಂದು ತಿಳಿದು ಬಂದಿದ್ದು, ಡೆತ್ ನೋಟ್ ಸಹ ಬರೆದಿಟ್ಟಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ್ದು ಅವರನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.