ಸಾಗರ: ಅರಣ್ಯಭೂಮಿ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ಸಾಗರದಲ್ಲಿ ರೈತರು ಪ್ರತಿಭಟನೆ
Sagar, Shimoga | Oct 30, 2025 ಕೆಪಿಸಿ ಭೂಮಿ ರೈತರಿಗೆ ಕೊಡಬೇಕು. ಶರಾವತಿ ಮುಳುಗಡೆ ಸಂತ್ರಸ್ತರಿಗೆ ಮತ್ತು ಅರಣ್ಯಭೂಮಿ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ಗುರುವಾರ ಮಧ್ಯಾಹ್ನ 3 ಗಂಟೆಗೆ ಮಲೆನಾಡು ರೈತರ ಹೋರಾಟ ಸಮಿತಿ ವತಿಯಿಂದ ಎಸಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ಸಮಿತಿಯ ಜಿಲ್ಲಾ ಸಂಚಾಲಕ ತೀ.ನ.ಶ್ರೀನಿವಾಸ್, ರಾಜ್ಯದಲ್ಲಿ ರೈತರು, ಜನಸಾಮಾನ್ಯರು ಬದುಕು ನಡೆಸುವುದು ದುಸ್ತರವಾಗಿದೆ. ಯಾವ ಕೆಲಸವೂ ಹಣ ಕೊಡದೆ ಆಗುತ್ತಿಲ್ಲ. ಭೂಹೀನ ರೈತರ ಸಮಸ್ಯೆಗೆ ಆಳುವವರು, ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಕೆಪಿಸಿ ಭೂಮಿ ಸಾಗುವಳಿದಾರರು, ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗೆ ದಶಕಗಳಿಂದ ಪರಿಹಾರ ಸಿಕ್ಕಿಲ್ಲ ಎಂದು ದೂರಿದರು.